ನ.11 ಮತ್ತು 12 ರಂದು ಪದವಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ನ.11 ಮತ್ತು 12 ರಂದು ಪದವಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ಬಾಗಲಕೋಟೆ, ನ.7: ಜಿಲ್ಲೆಯಲ್ಲಿ ನವೆಂಬರ 11 ಮತ್ತು 12 ರಂದು ಲೋಪವಾಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿಗಳಾದ ಪಿ.ಎ.ಮೇಘಣ್ಣವರ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಗಲಕೋಟೆ ನಗಗರದಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 3763 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆಂದರು. ಪರೀಕ್ಷಾ ಅಭ್ಯರ್ಥಿಗಳಿಗೆ ಯಾವುದೇ ತರಹದ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
    ಶಿಕ್ಷಣಾಧಿಕಾರಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಬಸಣ್ಣವರ ಪರೀಕ್ಷಾ ಕುರಿತು ಮಾಹಿತಿ ನೀಡುತ್ತಾ, ಸ್ಪರ್ಧಾತ್ಮಕ ಪರೀಕ್ಷೆಗಳು ಎರಡು ಅಧಿವೇಶನದಲ್ಲಿ ನಡೆಯಲಿವೆ. ನವೆಂಬರ 11 ರಂದು ಬೆಳಗಿನ ಅಧಿವೇಶನದಲ್ಲಿ ಸಾಮಾನ್ಯ ಪತ್ರಿಕೆ ಎರಡನೇ ಅಧಿವೇಶನದಲ್ಲಿ ಭಾಷೆ ಆಂಗ್ಲ, ನವೆಂಬರ 12 ರಂದು ಬೆಳಗಿನ ಅಧಿವೇಶನದಲ್ಲಿ ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು, ಮದ್ಯಾಹ್ನದ ಅಧಿವೇಶನದಲ್ಲಿ ಭಾಷಾ ಸಾಮಥ್ರ್ಯ ಪತ್ರಿಕೆ ಪರೀಕ್ಷೆ ನಡೆಯಲಿವೆ ಎಂದು ಸಭೆಗೆ ತಿಳಿಸಿದರು. 
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಮಾರ್ಗಾಧಿಕಾರಿಗಳಿಗೆ ಪರೀಕ್ಷೆ ನಡೆಯುವ 1.30 ಗಂಟೆಯ ಮುಂಚೆ ಪರೀಕ್ಷಾ ಕೇಂದ್ರಗಳಿಗೂ ಖಜಾನೆಗೂ ಇರುವ ದೂರವನ್ನು ಪರಿಗಣಿಸಿ ಪ್ರಶ್ನೆ ಪತ್ರಿಕೆ ಬಂಡಲ್‍ಗಳನ್ನು ಖಜಾನೆಯಿಂದ ವಿತರಿಸುವ ಕಾರ್ಯಮಾಡಬೇಕು. ಜಿಲ್ಲಾ ಖಜಾನೆಯಲ್ಲಿ ಸಿಸಿ ಕ್ಯಾಮರಾ, ಯುಪಿಎಸ್ ಹಾಗೂ ಇಂಟರನೇಟ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ತಿಳಿಸಿದರು. ಪತ್ರಿಯೊಂದು ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಮುಖ್ಯ ಅಧೀಕ್ಷಕರ ಕಾರ್ಯ ಪ್ರಮುಖವಾಗಿದ್ದು, ಪ್ರತಿಯೊಂದು ಹಂತದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಅಭ್ಯರ್ಥಿಗಳಿಗೆ ಆಸನ ವ್ಯವಸ್ಥೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ ಮಾಡಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು. ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿ ಪರೀಕ್ಷೆಯು ನಿಯಮಾನುಸಾರ ಹಾಗೂ ಸುಲಲಿತತವಾಗಿ ನಡೆಯುತ್ತಿರುವ ಬಗ್ಗೆ ಗಮನ ಹರಿಸಬೇಕು. ಅಹಿತಕರ ಘಟನೆ ನಡೆದ ಸಂದರ್ಭದಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಪರೀಕ್ಷೆ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಮಾಡುವ ಜವಾಬ್ದಾರಿ ವೀಕ್ಷಕರದ್ದಾಗಿದೆ ಎಂದರು.
ಪರೀಕ್ಷೆಗೆ ಅಭ್ಯರ್ಥಿಗಳು ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನನ್ನು ಹಾಗೂ ವಿವರಣಾತ್ಮಕ ಪರೀಕ್ಷೆಗೆ ಅಗತ್ಯವಾದ ಚಿತ್ರಗಳನ್ನು, ಕೋಷ್ಟಕ, ನಕ್ಷೆ, ಪ್ಲೋಚಾರ್ಟಗಳನ್ನು ಬಿಡಿಸಲು ಬೇಕಾದ ಉಪಕರಣಗಳನ್ನು ಮಾತ್ರ ಅವಕಾಶವಿದೆ ಹೊರತು ಪುಸ್ತಕ, ಹಾಳೆ, ಲಾಗ್, ಟೇಬಲ್, ಕ್ಯಾಲ್ಕೂಲೇಟರ್, ಸೆಲ್ ಪೋನ್ ಅವಕಾಶವಿರುವದಿಲ್ಲ. ಪರೀಕ್ಷಾ ದಿನದಂದು ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಯ ಬಗ್ಗೆ ಮಾಹಿತಿ ನೀಡಲು ವಿಶೇಷ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅಭ್ಯರ್ಥಿಗಳು ಪರೀಕ್ಷಾ ಸಮಯಕ್ಕಿಂತ 20 ನಿಮಿಷ ಮೊದಲು ಪರೀಕ್ಷಾ ಕೊಠಡಿಯಲ್ಲಿ ಹಾಜರಾಗಬೇಕು. ಪರೀಕ್ಷಾ ಮುಗಿದ ತಕ್ಷಣ ಮರಳಿ ಖಜಾನೆಗೆ ತಲುಪಿಸುವ ಕಾರ್ಯವಾಗಬೇಕೆಂದು ತಿಳಿಸಿದರು. ಪರೀಕ್ಷೆ ಸುಸೂತ್ರವಾಗಿ ನಡೆಸುವ ದೃಷ್ಠಯಿಂದ ಕಲಂ 144ರಡಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದರು.
ಸಭೆಯಲ್ಲಿ ಜಿ.ಪಂ ಸಿಇಓ ವಿಕಾಸ ಸುರಳಕರ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿವಾಯ್‍ಎಸ್‍ಪಿ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಎನ್.ಬಿ.ಗೊರವರ, ಪರೀಕ್ಷಾ ಕೇಂದ್ರದ ಮುಖ್ಯಾಧಿಕಾರಿ ಹಾಗೂ ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.