ನಾಳೆ ಪರಿನಿರ್ವಾಹಣಾ ದಿನಾಚರಣೆ

ನಾಳೆ ಪರಿನಿರ್ವಾಹಣಾ ದಿನಾಚರಣೆ

ಬಾಗಲಕೋಟೆ, ಡಿ. 05 :  ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ 6 ರಂದು ಬೆಳಿಗ್ಗೆ 9 ಗಂಟೆಗೆ ಹಳೇ ಬಾಗಲಕೋಟೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ ಅವರ ಪರಿನಿರ್ವಾಹಣಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಹಾಜರಿರುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.