ನಂದಿಹಿಲ್ಸ್ ಗೆ ವಿದ್ಯಾರ್ಥಿಗಳ ಜಾಲಿ ರೈಡ್- ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ದುರ್ಮರಣ

ನಂದಿಹಿಲ್ಸ್ ಗೆ ವಿದ್ಯಾರ್ಥಿಗಳ ಜಾಲಿ ರೈಡ್- ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ದುರ್ಮರಣ

ಬೆಂಗಳೂರು,ಜು.31: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ದೇವನಹಳ್ಳಿ ತಾಲೂಕಿನ ಕುಂದಾಣ-ಚಪ್ಪರಕಲ್ಲು ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಇಂದು ಬೆಳಗ್ಗೆ 6 ವಿದ್ಯಾರ್ಥಿಗಳು 3 ಬೈಕ್‍ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಒಂದು ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾರೆ. ವೀಕೆಂಡ್ ಅಂತ ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.