ಸಂತ್ರಸ್ತರಿಗೆ ಶೀಘ್ರ ನ್ಯಾಯ: ಅಮೆರಿಕ

ಸಂತ್ರಸ್ತರಿಗೆ ಶೀಘ್ರ ನ್ಯಾಯ: ಅಮೆರಿಕ

ವಾಷಿಂಗ್ಟನ್: ಜನಾಂಗೀಯ ದ್ವೇಷ ದಾಳಿಗೊಳಗಾದ ಸಂತ್ರಸ್ತರಿಗೆ ಶೀಘ್ರಗತಿಯಲ್ಲಿ ನ್ಯಾಯ ದೊರಕಿಸಿಕೊಡುವುದಾಗಿ ಅಮೆರಿಕ ಸೋಮವಾರ ಭರವಸೆ ನೀಡಿದೆ.  ದೌರ್ಜನ್ಯಕ್ಕೊಳಗಾದವರ ಪರವಾಗಿರುವ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಹಾಗೂ ಅಮೆರಿಕದ ಫೆಡರಲ್ ಸರ್ಕಾರಗಳು ದಾಳಿ ಕುರಿತಂತೆ ಸಂತಾಪ ವ್ಯಕ್ತಪಡಿಸಿದ್ದು, ಪ್ರಕರಣ ಸಂಬಂಧ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಶೀಘ್ರಗತಿಯಲ್ಲಿ ನ್ಯಾಯ ದೊರಕಿಸಿಕೊಡುವುದಾಗಿ ತಿಳಿಸಿವೆ ಎಂದು ಅಮೆರಿದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ತಿಳಿಸಿದೆ. 

ಅಮೆರಿಕದಲ್ಲಿರುವ ಭಾರತದ ರಾಯಭಾರಿ ನವತೇಜ್ ಸರ್ನಾ ಶ್ವೇತಭವನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಹಾರ್ದಿಶ್ ಪಟೇಲ್ ಹಾಗೂ ದೀಪ್ ರಾಯ್ ಮೇಲಾದ ಮಾರಾಣಾಂತಿಕ ಹಲ್ಲೆ ಕುರಿತು ತಮ್ಮ ಕಳವಳ ವ್ಯಕ್ತಪಡಿಸಿದ್ದರು ಎಂದಿದ್ದಾರೆ. ಭಾರತೀಯ ಮೇಲೆ ನಡೆಯುತ್ತಿರುವ ದಾಳಿಯನ್ನು ನಿಯಂತ್ರಿಸಲು ಅಮೆರಿಕದಲ್ಲಿರುವ ಭಾರತೀಯರಿಗೆ ರಕ್ಷಣೆ ನೀಡುವಂತೆ ತಿಳಿಸಲಾಗಿದೆ. ಈ ಸಂಬಂಧ ಭಾರತೀಯ ರಾಯಭಾರ ಕಚೇರಿ ಅಮೆರಿಕದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.