ಎನ್‍ಟಿಎಸ್‍ಇ-ಎನ್‍ಎಂಎಂಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಕರೆ

ಎನ್‍ಟಿಎಸ್‍ಇ-ಎನ್‍ಎಂಎಂಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಕರೆ

ವಿಜಯಪುರ ಸೆ,08: ಪ್ರಸಕ್ತ ಸಾಲಿನಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎನ್‍ಟಿಎಸ್‍ಇ-ಎನ್‍ಎಂಎಂಎಸ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಾಲೆಯ ಮುಖ್ಯಗುರುಗಳ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 
ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಎನ್‍ಟಿಎಸ್‍ಇ ಪರೀಕ್ಷೆ ಹಾಗೂ ಸರಕಾರಿ ಅನುದಾನಿತ ಶಾಲೆಗಳಿಗೆ ಎನ್‍ಎಂಎಂಎಸ್ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಶಾಲಾ ಮುಖ್ಯಸ್ಥರ ಮೂಲಕ ದಿನಾಂಕ : 20-09-2017ರೊಳಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.