ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬಾಗಲಕೋಟೆ, ಡಿ. 04: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2017-18ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
  

 ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದÀ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10 ಸಾವಿರ ಶಿಷ್ಯವೇತನವಾಗಿ ನೀಡಲಾಗುವುದು. ಅರ್ಜಿಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ.

    ಅರ್ಜಿ ಸಲ್ಲಿಸುವ ಕೊನೆಯ ದಿನ ಡಿಸೆಂಬರ 15 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ರಿಜಿಷ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳ್ರರು ದೂಸಂ.080-22215072 ಇವರನ್ನು ಸಂಪರ್ಕಿಸಬಹುದಾಗಿದೆ.