ಜಿಲ್ಲಾ ಹಾಲುಮತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಜಿಲ್ಲಾ ಹಾಲುಮತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಾಗಲಕೋಟ ಸೆ,12 : ಜಿಲ್ಲೆಯ ಹಾಲುಮತ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 2016-17ನೇ ಸಾಲಿನ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಹಾಗೂ ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಹಾಲಮತ ಸಮಾಜದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪುರಸ್ಕಾರ ನೀಡಲಾಗುತ್ತಿದೆ. 
    ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ 25 ರೊಳಗಾಗಿ ತಮ್ಮ ದೃಢೀಕರಿಸಿದ ಅಂಕಪಟ್ಟಿ ನಕಲು ಪ್ರತಿ, ಎಲ್‍ಸಿ ಹಾಗೂ ಒಂದು ಭಾವಚಿತ್ರದೊಂದಿಗೆ ಅಂಚೆ ಅಥವಾ ಖುದ್ದಾಗಿ ಸಲ್ಲಿಸಲು ಜಿಲ್ಲಾ ಹಾಲುಮತ ನೌಕರರ ಸಂಘದ ಅಧ್ಯಕ್ಷ ಎನ್.ಬಿ.ಗೊರವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ತಾಲೂಕಿಗೆ ಸಂಬಂಧಿಸಿದ ವಿದ್ಯಾರ್ಥಿಗಳು 9480210267, ಬದಾಮಿ 9663025732, ಹುನಗುಂದ 9902897225, ಜಮಖಂಡಿ 9449713397, ಮುಧೋಳ 9481840473 ಹಾಗೂ ಬೀಳಗಿ 9916634262 ಸಂಪರ್ಕಿಸಿ ದಾಖಲೆ ಸಲ್ಲಿಸುವಂತೆ ಕಾರ್ಯದರ್ಶಿ ಎಸ್.ಎಚ್.ಘಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.