ಉಚಿತ ಪರೀಕ್ಷಾ ಪೂರ್ವ ತರಬೇತಿ

ಉಚಿತ ಪರೀಕ್ಷಾ ಪೂರ್ವ ತರಬೇತಿ

ಬಾಗಲಕೋಟೆ, ಡಿ.1 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸ್ಟಡಿ ಸರ್ಕಲ್ ವತಿಯಿಂದ ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಹಾಕಿಕೊಂಡಿರುವ ಅಭ್ಯರ್ಥಿಗಳಿಗಾಗಿ ಡಿಸೆಂಬರ 5 ರಿಂದ 12 ರವರೆಗೆ ಬಾಗಲಕೋಟೆ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಯಲ್ಲಿ ವಿವಿಧ ವಿಷಯಗಳಲ್ಲಿ ಪರಿಣಿತರು ತರಬೇತಿ ನೀಡಲಿದ್ದು, ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಖುದ್ದಾಗಿ ಸಂಪರ್ಕಿಸಿ ತಮ್ಮ ಆಧಾರ ಕಾರ್ಡ ನಕಲು ಪ್ರತಿಯೊಂದಿಗೆ ಡಿಸೆಂಬರ 2 ರೊಳಗಾಗಿ ಹೆಸರನ್ನು ನೋಂದಾಯಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.