ಜಾವಲಿನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಜಾವಲಿನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಾಗಲಕೋಟೆ: ಅ. 07  : ಇತ್ತೀಚೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಾಥಮಿ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಬಾಗಲಕೋಟೆ ತಾಲೂಕಿನ ಯಂಕಂಚಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅರ್ಚನಾ ಗೌಡರ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಕ್ರೀಡಾಪಟು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕ ಬಸವರಾಜ ಅವರನ್ನು  ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ಡಿ.ಗೌಡರ, ಮುಖ್ಯಗುರು ಜಿ.ಎಸ್.ಖೋತ ಹಾಗೂ ಶಾಲಾ ಶಿಕ್ಷಕವೃಂದ ಅಭಿನಂದಿಸಿದೆ.