ವಿಶ್ವವಿದ್ಯಾಲಯ ಸ್ಥಾಪಿಸಲು 25 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ನಿರ್ಧರ

ವಿಶ್ವವಿದ್ಯಾಲಯ ಸ್ಥಾಪಿಸಲು 25 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ನಿರ್ಧರ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಉತ್ತುವಳ್ಳಿ ಗ್ರಾಮದಲ್ಲಿ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು 25 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಈ ವಿಷಯ ತಿಳಿಸಿದರು. ಇಂಟರ್‌ನ್ಯಾಷನಲ್ ಬುದ್ಧಿಸ್ಟ್ ಮಾಂಕ್ಸ್ ಚಾರಿಟೆಬಲ್ ಟ್ರಸ್ಟ್’  ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲಿದೆ. ಕಸಬಾ ಹೋಬಳಿ ಉತ್ತುವಳ್ಳಿ ಗ್ರಾಮದ ಸರ್ವೆ ನಂಬರ್‌ 117ರಲ್ಲಿ 464 ಎಕರೆ ಜಮೀನು ಇದ್ದು, ಈ ಪೈಕಿ  25 ಎಕರೆ ಗೋಮಾಳ ಭೂಮಿಯನ್ನು ಮಾರ್ಗಸೂಚಿ ದರದ ಶೇ 50ರಷ್ಟು ದರದಲ್ಲಿ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು  ಅವರು ಹೇಳಿದರು.  ಜಿಲ್ಲಾ ಆಸ್ಪತ್ರೆಗಳಲ್ಲಿರುವ ಉಚಿತ ರೋಗ ಪತ್ತೆ ಕೇಂದ್ರಗಳಿಗೆ ₹103.53 ಕೋಟಿ ವೆಚ್ಚದಲ್ಲಿ ಸಿ.ಟಿ ಸ್ಕ್ಯಾನ್‌, ಎಂ.ಆರ್‌.ಐ ಸ್ಕ್ಯಾನ್‌ ಯಂತ್ರ ಖರೀದಿ, 550 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಸೇರಿದಂತೆ 33 ಕ್ಕೂ ಹೆಚ್ಚು ಯೋಜನೆ ಮತ್ತು ಕಾರ್ಯಕ್ರಮಗಳಿಗೆ  ಸಂಪುಟ ಸಭೆ ಒಪ್ಪಿಗೆ ನೀಡಿದೆ.  ಪಶು ವೈದ್ಯಕೀಯ ಇಲಾಖೆಯಲ್ಲಿ  ಖಾಲಿ ಇರುವ 100 ಬ್ಯಾಕ್‌ಲಾಗ್‌ ಹಾಗೂ 450 ವೈದ್ಯಾಧಿಕಾರಿ ಹುದ್ದೆಗಳನ್ನು ಅರ್ಹತೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ವಿವರಿಸಿದರು.