ಕೆಂಪಯ್ಯ  ಡಿಜಿಪಿ ಓಂಪ್ರಕಾಶ್ ವಿಚಾರಣೆಗಾಗಿ  ಸಿಬಿಐ ಮುಂದೆ ಹಾಜರಾಗಲಿದ್ದಾರೆ

ಕೆಂಪಯ್ಯ  ಡಿಜಿಪಿ ಓಂಪ್ರಕಾಶ್ ವಿಚಾರಣೆಗಾಗಿ  ಸಿಬಿಐ ಮುಂದೆ ಹಾಜರಾಗಲಿದ್ದಾರೆ

ನವದೆಹಲಿ: ರಾಜ್ಯದಲ್ಲಿನ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಅವರ ಸಲಹೆಗಾರ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ಓಂಪ್ರಕಾಶ್ ಅವರಿಗೆ ಸಿಬಿಐ ನೋಟಿಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಸಿಬಿಐ ಕೇಂದ್ರ ಕಚೇರಿಯಲ್ಲಿ ಇಬ್ಬರ ವಿಚಾರಣೆ ನಡೆಯಲಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.  ರಾಜ್ಯದಲ್ಲಿನ ಒಂದಂಕಿ ಲಾಟರಿ ಹಗರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದ ನಂತರ ಹಲವು ಹಿರಿಯ ಪೊಲೀಸ್ ಅಧಿಕಾರಿಗಳ ವಿಚಾರಣೆಯನ್ನು ಸಿಬಿಐ ನಡೆಸಿತ್ತು. ಈಗ ಕೆಂಪಯ್ಯ ಹಾಗೂ ಓಂಪ್ರಕಾಶ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು  ಈ ನಿಟ್ಟಿನಲ್ಲಿ ಕೆಂಪಯ್ಯ ಮತ್ತು ಓಂಪ್ರಕಾಶ್ ಶುಕ್ರವಾರ ಸಿಬಿಐ ಮುಂದೆ ಹಾಜರಾಗಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.