ಆಟೋಗೆ ಹಿಂದಿನಿಂದ ಲಾರಿ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು

ಆಟೋಗೆ ಹಿಂದಿನಿಂದ ಲಾರಿ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು

ರಾಯಚೂರು,10: ಆಟೋಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರಿನ ಹಿರೇಹಳ್ಳದ ಬಳಿ ನಡೆದಿದೆ.

ಲಕ್ಷ್ಮೀ ಕ್ಯಾಂಪ್ ನ 46 ವರ್ಷದ ಹಸನಸಾಬ್ ಮೃತ ಚಾಲಕ. ಪಿಡಬ್ಲ್ಯೂಡಿ ಕ್ಯಾಂಪ್ ನಿಂದ ಸಿಂಧನೂರಿಗೆ ಒಬ್ಬರೇ ಮರಳುತ್ತಿದ್ದಾಗ ಹಳ್ಳದ ಬಳಿ ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ.

ಸದ್ಯ ಲಾರಿ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಹಿನ್ನೆಲೆ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.