ಸೂಳೇಭಾವಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸೂಳೇಭಾವಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬಾಗಲಕೋಟೆ, ಡಿ.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ  ಹುನಗುಂದ ತಾಲೂಕಿನ ಸೂಳೇಭಾವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.
    ಸೂಳೇಭಾವಿ ಗ್ರಾ.ಪಂ ಅಧ್ಯಕ್ಷರಾದ ರಾಜಮಹವ್ಮ್ಮದ ಮುಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಸ್ಥಾನ ವಹಿಸಿದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾರಕ ಬಡಿಗೇರ ಮಾತನಾಡಿ, 6 ರಿಂದ 14 ವರ್ಷದೊಳಗಿನ ಮಕ್ಕಳನ್ನು ದುಡಿಕೊಳ್ಳುವುದು ಅಪರಾಧವಾಗಿದ್ದು, ಕೆಲವೊಂದು ಸಂದರ್ಭದಲ್ಲಿ ಪಾಲಕರು ಶಿಕ್ಷಣದ ಅರಿವಲ್ಲದೆ ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸುತ್ತಿದ್ದು, ಅಂತಹ ಪಾಲಕರಿಗೆ ಶಿಕ್ಷಕರು ತಿಳುವಳಿಕೆ ನೀಡಬೇಕೆಂದು ಹೇಳಿದರು. ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದು, ಎಲ್ಲ ಮಕ್ಕಳು ಅದರ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಹೊಂದಬೇಕೆಂದರು.
    ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಎಚ್.ವಾಯ್.ಆವೀನ ಮಾತನಾಡಿ ಮಕ್ಕಳು ತಪ್ಪದೇ ಶಾಲೆಗೆ ಹೋಗಿ ಉತ್ತಮ ಶಿಕ್ಷಣ ಪಡೆದು ತಂದೆ ತಾಯಿಯರಿಗೆ ನೆರವಾಗಬೇಕು. ಯಾವುದೇ ಕಾರಣಕ್ಕೂ ಪಾಲಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದೆಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸರಕಾರಿ ಪ್ರೌಢಶಾಲೆಯ ಪ್ರಾಚಾರ್ಯ ಎ.ಎಚ್.ಬೆಲ್ಲದ ಮಾತನಾಡಿ ಸರ್ಕಾರ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಜಾರಿಗೆ ತಂದಿದೆ. ಮಕ್ಕಳಿಗೆ ಎಲ್ಲ ರೀತಿಯ ಶಿಕ್ಷಣಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ನಿಡಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ ಸಿಆರ್‍ಪಿ ಎಸ್.ಎಸ್.ಹುಲಗಿನಾಳ ಸೇರಿದಂತೆ ಇತರು ಉಪಸ್ಥಿತರಿದ್ದರು. ಸಹಶಿಕ್ಷಕ ಎಸ್.ಸಿ.ಚಲವಾದಿ ಸ್ವಾಗತಿಸಿದರು. ಶಿಕ್ಷಕಿ ಎಸ್.ಸಿ.ರಂಜನಗಿ ವಂದಿಸಿದರು. ಪ್ರೋಗ್ರಾಮ ಮ್ಯಾನೇಜರ ಪರಶುರಾಮ ತಳವಾರ ನಿರೂಪಿಸಿದರು.