ಎನ್‌ಇಟಿ, ಎಸ್‌ಎಲ್‌ಇಟಿ ಮತ್ತು ಪಿಎಚ್‌ಡಿ ಮಾಡಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನ ಏರಿಕೆ

ಎನ್‌ಇಟಿ, ಎಸ್‌ಎಲ್‌ಇಟಿ ಮತ್ತು ಪಿಎಚ್‌ಡಿ ಮಾಡಿರುವ ಅತಿಥಿ ಉಪನ್ಯಾಸಕರಿಗೆ ಗೌರವಧನ ಏರಿಕೆ

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಶುಕ್ರವಾರ ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಸ್ನಾತಕೋತ್ತರ ಪದವಿ ಜೊತೆ ಎನ್‌ಇಟಿ, ಎಸ್‌ಎಲ್‌ಇಟಿ ಮತ್ತು ಪಿಎಚ್‌ಡಿ ಮಾಡಿರುವ  ಉಪನ್ಯಾಸಕರಿಗೆ ತಿಂಗಳಿಗೆ ₹11,500ರಿಂದ ₹13,000ಕ್ಕೆ ಹಾಗೂ ಸ್ನಾತಕೋತ್ತರ ಪದವಿ ಪಡೆದವರಿಗೆ ₹9,500ರಿಂದ ₹11,000ಕ್ಕೆ ಏರಿಕೆ ಮಾಡಲಾಗಿದೆ. ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅತಿಥಿ ಉಪನ್ಯಾಸಕರಿಗೆ ₹8000ದಿಂದ  ₹9,500ಕ್ಕೆ ಹೆಚ್ಚಿಸಲಾಗಿದೆ ಎಂದರು. ಅಲ್ಲದೆ, ಪ್ರತಿಭಟನೆಯಲ್ಲಿ ತೊಡಗಿರುವ ಉಪನ್ಯಾಸಕರೊಂದಿಗೆ ಸಭೆ  ನಡೆಸುವುದಾಗಿಯೂ ಸಚಿವರು  ಭರವಸೆ ನೀಡಿದರು.