ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ಬಾಗಲಕೋಟೆ ಜೂ, 9:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅನೀಲ ಕಟ್ಟಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ವಹಿಸುವರು.

ಮುಖ್ಯ ಅತಿಥಿಗಳಾಗಿ ಜಿ.ಪಂ ಸಿಇಓ ವಿಕಾಸ ಸುರಳಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಬ್ದುಲ್‍ರಹೀಮ್ ಹುಸೇನ್ ಶೇಖ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ತಹಶೀಲ್ದಾರ ವಿನಯ ಕುಲಕರ್ಣಿ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಪವಾಡಶೆಟ್ಟೆರ ಭಾಗವಹಿಸಲಿದ್ದಾರೆ. ನ್ಯಾಯವಾದಿ ಪಿ.ಎಸ್.ಭೈರಮಟ್ಟಿ ಬಾಲಕಾರ್ಮಿಕ ಕಾಯ್ದೆ, ಮಕ್ಕಳ ಹಕ್ಕುಗಳ ಹಾಗೂ ರಕ್ಷಣೆ ಕುರಿತು ಉಪನ್ಯಾಸ ನೀಡಲಿದ್ದಾರೆ.
-