7 ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

7 ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

ಬಾಗಲಕೋಟೆ, ಡಿ.5 :  ರಾಜ್ಯ ಸರಕಾರದ ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ ಹಾಗೂ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಡಿಸೆಂಬರ 7 ರಂದು ಬೆಳಿಗ್ಗೆ 10 ರಿಂದ 1.30 ಗಂಟೆವರೆಗೆ ಬೀಳಗಿ ತಾಲೂಕಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. 
    ಶಿಬಿರದಲ್ಲಿ ಹೃದಯ ರೋಗ, ಕ್ಯಾನ್ಸರ್, ಮೂತ್ರಪಿಂಡದಲ್ಲಿಯ ಹರಳು ಹಾಗೂ ನರ ರೋಗಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಲಿದೆ. ಇಸಿಜಿ, 2ಡಿಇಸಿಎಚ್‍ಓ, ಸಕ್ಕರೆ ಕಾಯಿಲೆ ತಪಾಸಣೆಯನ್ನು ಉಚಿತವಾಗಿ ಮಾಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಾಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊನಂ.9538570993, 8861005542 ಸಂಪರ್ಕಿಸಬಹುದಾಗಿದೆ.