ನಟ ಅಲ್ಲು ಅರ್ಜುನ್ ರಾಜಕೀಯ ರಂಗಕ್ಕೆ ಬರತಾ ಇದ್ದಾರೆ..!

ನಟ ಅಲ್ಲು ಅರ್ಜುನ್ ರಾಜಕೀಯ ರಂಗಕ್ಕೆ ಬರತಾ ಇದ್ದಾರೆ..!

ಹೈದರಾಬಾದ್, ನ.11: ನಟ ಅಲ್ಲು ಅರ್ಜುನ್ ಇತ್ತೀಚೆಗೆ ಭಾಗವಹಿಸಿದ್ದ ಪಾರ್ಟಿಯಲ್ಲಿ ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ.

ಸಾಮಾನ್ಯವಾಗಿ ಅಲ್ಲು ಅರ್ಜುನ್ ಅವರು ಹೆಚ್ಚು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಕುಟುಂಬದ ಸದಸ್ಯರ ಜೊತೆ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಮಾತ್ರವೇ ಭಾಗವಹಿಸುತ್ತಾರೆ. ಇತ್ತೀಚೆಗೆ ಇಂತಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ತಮ್ಮ ಮುಂದಿನ ಸಿನಿಮಾ ವೃತ್ತಿ ಜೀವನ ಹಾಗೂ ರಾಜಕೀಯ ಪ್ರವೇಶದ ಕುರಿತು ಮಾತನಾಡಿ ಎಲ್ಲರನ್ನು ಶಾಕ್ ಒಳಪಡಿಸಿದ್ದರು ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಪ್ರಸ್ತುತ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಎರಡು ರಾಜ್ಯಗಳಲ್ಲಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿರುವ ಅವರು ಸೂಕ್ತ ಸಂದರ್ಭದಲ್ಲಿ ರಾಜಕೀಯಕ್ಕೆ ಪ್ರವೇಶ ನೀಡುವ ಕುರಿತು ಚಿಂತನೆ ನಡೆಸಿದ್ದಾರೆ, ಆದರೆ ಅದು ಅರ್ಜುನ್‍ರ 40 ನೇ ವಯಸ್ಸಿನ ನಂತರವೇ ಎಂದು  ಮೂಲಗಳು ತಿಳಿಸಿವೆ.

ಟಾಲಿವುಡ್‍ನಲ್ಲಿ ಅಲ್ಪ ಸಮಯದಲ್ಲಿಯೇ ತಮ್ಮ ವಿಶಿಷ್ಟ ನಟನೆಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನು ಹಲವು ಅಭಿಮಾನಿಗಳು ತಮ್ಮ ಪ್ರೀತಿಯ ನಟನ ರಾಜಕೀಯ ಪ್ರವೇಶ ಮಾಡುವ ಕುರಿತು ಸುದ್ದಿ ಕೇಳಿ ಅಚ್ಚರಿಗೊಂಡಿದ್ದಾರೆ.