ಮರುವಿನ್ಯಾಸ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

ಮರುವಿನ್ಯಾಸ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

ಬಾಗಲಕೋಟೆ ಜೂ.17:ವ  ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗಾಗಿ ಜಿಲ್ಲೆಯ 6 ತಾಲೂಕುಗಳ ಎಲ್ಲ ಹೋಬಳಿಗಳ ರೈತರಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರ್ಕಾರವು ಘೋಷಿಸಿದ್ದು, ತೋಟಗಾರಿಕೆ ಬೆಳೆಗಳಾದ ಹಸಿ ಮೆಣಸಿನಕಾಯಿ (ಮಳೆಯಾಶ್ರೀತ) ಹಾಗೂ ದಾಳಿಂಬೆ ಬೆಳೆಗಳನ್ನು ಈ ಯೋಜನೆಯ ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ.
    ಬೆಳೆ ಸಾಲ ಪಡೆಯುವ ಹಾಗೂ ಬೆಳೆ ಸಾಲ ಪಡೆಯದ ರೈತರು ಜೂನ್ 30 ರೊಳಗಾಗಿ ಹತ್ತಿರದ ಬ್ಯಾಂಕ್ ಶಾಖೆಗಳಲ್ಲಿ ನೋಂದಾಯಿಸುವಂತೆ ತೋಟಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ವಿಮೆ ಕಂತಿಗೆ ಸಂಬಂಧಪಟ್ಟಂತೆ ಹಸಿ ಮೆಣಸಿನಕಾಯಿ ಬೆಳೆಗೆ ರೂ.3491 ಹಾಗೂ ದಾಳಿಂಬೆ ಬೆಳೆಗೆ ರೂ.6324 ಪ್ರತಿ ಹೆಕ್ಟೇರ್ರಂುತೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಾ ತೋಟಗಾರಿಕೆ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ.