ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಬಾಗಲಕೋಟೆ: ಸೆ, 08 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದ ಅಭ್ಯರ್ಥಿಗಳಿಗೆ ಜೆಇಇ, ಎನ್‍ಇಇಟಿ, ಜಿಎಟಿಇ ಹಾಗೂ ಜಿಆರ್‍ಇ ಮುಖಾಂತರ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ವಿದ್ಯಾರ್ಥಿಗಳನ್ನು ಮೆರಿಟ್‍ಗಳ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
    ಪರಿಶಿಷ್ಟ ಜಾತಿ 12 ಹಾಗೂ ಪರಿಶಿಷ್ಟ ವರ್ಗಕ್ಕೆ 8 ತರಬೇತಿ ನೀಡಲಾಗುತ್ತದೆ. ಜೆಇಇ, ಎನ್‍ಇಇಟಿ ತರಬೇತಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪಿಯುಸಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು. ತರಬೇತಿಗೆ ಎಸ್.ಎಸ್.ಎಲ್.ಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಜಿಎಟಿಇ, ಜಿಆರ್‍ಇ ತರಬೇತಿಗೆ ಇಂಜಿನೀಯರಿಂಗ್ 8ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿರಬೇಕು. ಆಯ್ಕೆಗೆ 7ನೇ ಸೆಮೆಸ್ಟರವರೆಗೆ ಪಡೆದ ಅಂಕಗಳ ಮೇಲೆ ಆಯ್ಕೆಗೆ ಪರಿಗಣಿಸಾಗುವುದು. 
    ಆಯ್ಕೆ ಮಾಡಲಾಗುವ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.50 ರಷ್ಟು ನಿಲಯಾರ್ಥಿಗಳಿಗೆ ಕಲ್ಪಿಸಲಾಗುವುದು. ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬಾಗಲಕೋಟ ಕಾರ್ಯಾಲಯದಿಂದ ಸೆಪ್ಟೆಂಬರ 18 ರೊಳಗಾಗಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ 19 ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235526ಗೆ ಸಂಪರ್ಕಿಸಬಹುದು.