ಸ್ವಸಹಾಯ ಸಂಘಗಳಿಂದ ಅರ್ಜಿ ಕರೆ

ಸ್ವಸಹಾಯ ಸಂಘಗಳಿಂದ ಅರ್ಜಿ ಕರೆ

ವಿಜಯಪುರ ಸೆ,12: ನಗರ ಪ್ರದೇಶದ ವ್ಯಾಪ್ತಿಯಲ್ಲಿಯ ಜಿಲ್ಲಾ ಪಂಚಾಯತಿ ಆವರಣದಲ್ಲಿ ಎಸ್.ಜಿ.ಎಸ್.ವೈ. ಯೋಜನೆಯಡಿ ನೆಲ ಮಹಡಿಯ 2 ಮಳಿಗೆಗಳು ಹಾಗೂ 1ನೇ ಮಹಡಿಯ 10 ವಾಣಿಜ್ಯ ಮಳಿಗೆಗಳು ಮತ್ತು ಡಿ.ದೇವರಾಜ ಅರಸು ಭವನದ ಎದುರಿಗಿರುವ 2 ಮಳಿಗೆಗಳನ್ನು ಬಾಡಿಗೆ ಆಧಾರದ ಮೇಲೆ ಹಂಚಿಕೆ ಮಾಡಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ಅರ್ಜಿ ಸಲ್ಲಿಸಲು 20-09-2017 ಕೊನೆಯ ದಿನಾಂಕವಾಗಿದ್ದು, ಸ್ವಸಹಾಯ ಸಂಘಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಮತ್ತು ಸ್ವಸಹಾಯ ಸಂಘಗಳಿಂದ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಗಳು ಸ್ವೀಕೃತಿಯಾಗದಿದ್ದಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಪರಿಗಣಿಸಲಾಗುವುದು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ನಿರ್ದೇಶಕರು, ಡಿ.ಆರ್.ಡಿ.ಎ. ಕೋಶ ಜಿಲ್ಲಾ ಪಂಚಾಯತಿ ವಿಜಯಪುರ ಇವರನ್ನು ಸಂಪರ್ಕಿಸಲು ಕೋರಿದೆ.