ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ವಿಜಯಪುರ,ಮೇ.20:   ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 42 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1 ಸಾವಿರ ರೂ. ದಿಂದ 1200 ರೂ. ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

    ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ-ಬೆಟಗೇರಿಯಲ್ಲಿ 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ ತಮಿಳುನಾಡು-15, ಎಸ್.ಪಿ.ಕೆ.ಎಂ.ಭಾರತೀಯ ಕೈಮಗ್ಗ 
ತಂತ್ರಜ್ಞಾನ ಸಂಸ್ಥೆ ವೆಂಕಟಗಿರಿ(ನೆಲ್ಲೂರು, ಆಂಧ್ರಪ್ರದೇಶ) -03 ಹಾಗೂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಕಣ್ಣೂರು ಕೇರಳ-02 ಅಭ್ಯರ್ಥಿಗಳು ಸೇರಿದಂತೆ 42 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಅರ್ಹ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು 
ದಿನಾಂಕ : 10-06-2017ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-587102 ಇವರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ 
ಮಾಹಿತಿಗಾಗಿ ದೂ:08352-251268 ಸಂಖ್ಯೆಗೆ ಸಂಪರ್ಕಿಸಲು ಕೋರಿದೆ.