ಜೂ.11 ರಂದು ವಿಜಯಪುರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ

ಜೂ.11 ರಂದು ವಿಜಯಪುರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ

ವಿಜಯಪುರ, ಜೂ.8:   ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಜೂ.11 ರಂದು ವಿಜಯಪುರಕ್ಕೆ ಆಗಮಿಸಲಿದ್ದು, ತಾತ್ಕಾಲಿಕ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ.  
    ಜೂ.11 ರಂದು ಮಧ್ಯಾಹ್ನ 12-30 ಗಂಟೆಗೆ ಹುಬ್ಬಳ್ಳಿಯಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು, 1-30ಕ್ಕೆ ವಿಜಯಪುರ ಸೈನಿಕ ಸ್ಕೂಲ್ ಆವರಣ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮಹಿಳಾ ವಿವಿ ಜ್ಞಾನಶಕ್ತಿ ಆವರಣದಲ್ಲಿ ಆಯೋಜಿಸಿರುವ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ನಾಮಕರಣ ಅನಾವರಣ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4-15ಕ್ಕೆ ವಿಜಯಪುರದಿಂದ ಹೆಲಿಕ್ಯಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.