ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿಬಿದ್ದ ಡಿಕೆಶಿ ಬಳಗ

ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿಬಿದ್ದ ಡಿಕೆಶಿ ಬಳಗ

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚಿಸಲು ಡಿ ಕೆ ಶಿವಕುಮಾರ್ ರವರ ಪಾತ್ರ ಬಹಳಷ್ಟಿದೆ. ಇನ್ನು ರಾಜ್ಯದಲ್ಲಿ ಇಂದು ಎಚ್ ಡಿ ಕುಮಾರಸ್ವಾಮಿ ರವರು ಕರ್ನಾಟಕ ರಾಜ್ಯದ 25 
ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. 

ಡಿಕೆ ಶಿವಕುಮಾರ್ ಮತ್ತು ಸಹೋದರ ಡಿಕೆ ಸುರೇಶ್ ಬಿಜೆಪಿ ತೆಕ್ಕೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಜಾರದಂತೆ ಕಾಪಾಡಿಕೊಳ್ಳಲು ತುಂಬಾ ಕಷ್ಟಪಟ್ಟಿದ್ದರು. 

ಉಪ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಭಾರೀ ಅಕ್ರೋಶಗೊಂಡಿರುವ ಡಿಕೆ ಶಿವಕುಮಾರ್ ಮತ್ತು ಸಹೋದರ ಡಿಕೆ ಸುರೇಶ್ ಹೈಕಮಾಂಡ್ ವಿರುದ್ಧವೇ ತಿರುಗಿಬಿದ್ದಿದ್ದಾರೆ.