ರಘುವೀರಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ರಘುವೀರಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಬಾಗಲಕೋಟೆ 6 :  ಬದಾಮಿ ತಾಲೂಕಿನ ಅನವಾಲದ ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಕೆ.ಎಂ. ರಘುವೀರ ಅವರಿಗೆ ಪ್ರಸಕ್ತ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಉಮಾಶ್ರೀ, ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಎಚ್.ವೈ. ಮೇಟಿ, ಜಿ.ಪಂ. ಅಧ್ಯಕ್ಷೆ ವೀಣಾ ಕಾಶಪ್ಪನವರ, ಜಿಲ್ಲಾಧಿಕಾರಿ ಪಿ.ಎ. ಮೇಘಣ್ಣವರ, ಜಿ.ಪಂ. ಸಿಇಓ ಕಿಶೋರ ವಿಕಾಸ ಸುರಳ್ಕರ, ಎಸ್ಪಿ ಸಿ.ಬಿ. ರಿಷ್ಯಂತ ಮತ್ತಿತರರು ಸನ್ಮಾನಿಸಿ ಗೌರವಿಸಿದರು. ಪ್ರಶಸ್ತಿ ಪಡೆದ ರಘುವೀರ ಅವರನ್ನು ಶಾಲೆಯ ಮುಖ್ಯೋಪಾಧ್ಯಾಯ ಎ.ಎನ್. ಪುಲಲೇಶಿ, ವಿಷಯ ಪರಿವೀಕ್ಷಕಿ ಶ್ರೀಮತಿ ಎಸ್.ಎನ್. ಕನಮಡಿ ಮತ್ತಿತರರು ಅಭಿನಂದಿಸಿದ್ದಾರೆ.