ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಗೆ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಗೆ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗ, 13: ಹಿರಿಯ ಪತ್ರಕರ್ತ ಪಿ.ಸಾಯಿನಾಥ್  2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ. 

ಚಿತ್ರದುರ್ಗದ ಮುರುಘಾಮಠ ದಿಂದ‌ ಕೊಡಮಾಡುವ ಈ ಪ್ರಶಸ್ತಿಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಿ. ಸಾಯಿನಾಥ್ ಆಯ್ಕೆ ಆಗಿದ್ದಾರೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಾಯಿನಾಥ್ ನೀಡಿರುವ ಕೊದುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಬಸವಶ್ರೀ ಪ್ರಶಸ್ತಿ ಯು ರೂ. 5 ಲಕ್ಷ ನಗದು, ಪ್ರಮಾಣಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅ.23 ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 

12 ನೆಯ ಶತಮಾನದ ಸಾಮಾಜಿಕ ಸುಧಾರಕ ಬಸವೇಶ್ವರನ ತತ್ವಗಳನ್ನು ಅನುಸರಿಸಿ ಸಮಾಜಕ್ಕೆ ತಮ್ಮ ವಿಶೇಷ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀದಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.

'ಪೀಪಲ್ಸ್ ಆರ್ಚಿವ್ ಆಫ್ ರೂರಲ್ ಇಂಡಿಯಾ' ದ ಸಂಸ್ಥಾಪಕ ಸಂಪಾದಕರಾಗಿರುವ ಸಾಯಿನಾಥ್ 'ದಿ ಹಿಂದೂ' ಪತ್ರಿಕೆಯ ಗ್ರಾಮೀಣ ವ್ಯವಹಾರಗಳ ವಿಭಾಗದ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದರು.