ಡಿ.2 ರಂದು ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ 

ಡಿ.2 ರಂದು ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ 

ಬಾಗಲಕೋಟೆ, ಡಿ.1: ನಗರದ ಪ್ರತಿಷ್ಠಿತ ಬಸವೇಶ್ವರ ಸಹಕಾರಿ ಬ್ಯಾಂಕಿನ ಶತಮಾನೋತ್ಸವ ಅಂಗವಾಗಿ ಇದೇ 2ರಂದು ಬೆಳಿಗ್ಗೆ 11 ಗಂಟೆಗೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 
ನವನಗರದ ಪ್ರಧಾನ ಕಚೇರಿಯ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಗದಗ ಡಂಬಳ ತೋಂಟದಾರ್ಯ ಸಂಸ್ಥಾನಮಠದ ಡಾ.ಸಿದ್ದಲಿಂಗ ಸ್ವಾಮೀಜಿ, ಕಾಗಿನೆಲೆ ಕನಕಪೀಠದ ನಿರಂಜನಾನಂದಪುರಿ ಸ್ವಾಮೀಜಿ,ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ,ರಾಜೇನಹಳ್ಳಿಯ ಎರಡನೇಯ ಪ್ರಸನ್ನಾನಂದಪುರಿ ಸ್ವಾಮೀಜಿಯವರು,ಶಿವಯೋಗಮಂದಿರದ ಮದ್ವೀರಶೈವ ಸಂಸ್ಥೆಯ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳ ಸಾನಿಧ್ಯದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.ಇಳಕಲ್ಲನ ಚಿತ್ತರಗಿ ಸಂಸ್ಥಾನಮಠದ ಡಾ.ಮಹಾಂತ ಸ್ವಾಮೀಜಿಯವರು ಅಧ್ಯಕ್ಷತೆ ವಹಿಸಲಿದ್ದಾರೆ 
ಸಂಜೆ 6 ಗಂಟೆಗೆ ನಿಜಗುಣಾನಂದ ಸ್ವಾಮೀಜಿಗಳಿಂದ ಧಾರ್ಮಿಕ ಅನುಭವ ಕಾರ್ಯಕ್ರಮ ಬಸವೇಶ್ವರ ಬ್ಯಾಂಕಿನ ಆವರಣದಲ್ಲಿ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.