ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವ ಸನ್ಮಾನ

ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವ ಸನ್ಮಾನ

ವಿಜಯಪುರ,ಸೆ.9: ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯಲ್ಲಿ ವಿಜಯಪುರ ಜಿಲ್ಲೆಯ ಅಗಸನಾಳ ಎಚ್.ಪಿ.ಎಸ್. ಶಾಲೆಯ ಸಹಶಿಕ್ಷಕರಾದ ವ್ಹಿ.ಎಸ್.ಮೋರೆ ಅವರಿಗೆ ನಗರ ಶಾಸಕ ಡಾ. ಮಕ್ಬುಲ್ ಬಾಗವಾನ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಜಿಪಂ ಅಧ್ಯಕ್ಷರಾದ ಶ್ರೀಮತಿ ನೀಲಮ್ಮ ಸಿದ್ಧಣ್ಣ ಮೇಟಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಂದರೇಶ ಬಾಬು ಅವರ ಉಪಸ್ಥಿತಿಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ `ಜಿಲ್ಲಾ ಆದರ್ಶ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.