ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ : ಅರ್ಜಿ ಆಹ್ವಾನ

ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ : ಅರ್ಜಿ ಆಹ್ವಾನ

ವಿಜಯಪುರ ಸೆ,08: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿಯಲ್ಲಿ ವಸತಿ ಕಾರ್ಯಾಗಾರದ 29 ಗುರಿಗಳನ್ನು ಗಿರಿಜನ ಉಪ ಯೋಜನೆಯಡಿ 14 ಗುರಿಗಳನ್ನು ನಿಗದಿಪಡಿಸಲಾಗಿದ್ದು, ಬಿದಿರು ಕೆಲಸ, ಬಡಗಿ ಕೆಲಸ, ಚರ್ಮಗಾರಿಕೆ, ಕರಕುಶಲ ವಸ್ತು ತಯಾರಿಕೆ, ಕಮ್ಮಾರಿಕೆ, ಕುಂಬಾರಿಕೆ, ಬೆಳ್ಳಿ-ಬಂಗಾರ ಆಭರಣಗಳ ತಯಾರಿಕೆ, ಜನರಲ್ ಇಂಜಿನೀಯರಿಂಗ್, ಛಾಪೆ ಹೆಣೆಯುವುದು, ಬುಟ್ಟಿ ಹೆಣೆಯುವುದು ಹಾಗೂ ಎತ್ತಿನ ಗಾಡಿ ತಯಾರಿಕೆ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೂರ್ಣ ಪ್ರಮಾಣದ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದಾಗಿದೆ. 
ನಿಗದಿತ ನಮೂನೆಯ ಅರ್ಜಿಯನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಂಟಿ ನಿರ್ದೇಶಕರವರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಪಡೆದು, ಭರ್ತಿ ಮಾಡಿ ದಿನಾಂಖ : 25-09-2017ರೊಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: 08352-250976, 250067 ಸಂಪರ್ಕಿಸಲು ಕೋರಿದೆ.