ಸಾಕಷ್ಟು ವಿಶೇಷತೆಗಳಿಂದ ಕೂಡಿದ ಜೆಡಿಎಸ್ ಪ್ರಣಾಳಿಕೆ

ಸಾಕಷ್ಟು ವಿಶೇಷತೆಗಳಿಂದ ಕೂಡಿದ ಜೆಡಿಎಸ್ ಪ್ರಣಾಳಿಕೆ

ಮಾಜಿ ಮುಖ್ಯಮಂತ್ರಿ , ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ ಎಂಬ 63 ಪುಟಗಳ ಜೆಡಿಎಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. 

ಇನ್ನು ಇವರ ಪ್ರಣಾಳಿಕೆಯಲ್ಲಿ ರೈತರ, ನೇಕಾರರ, ಮೀನುಗಾರರ, ಸ್ತ್ರೀ ಶಕ್ತಿ ಸಂಘಗಳ ಬಡ್ಡಿ ಸಹಿತ ಸಾಲಮನ್ನಾ, ಗ್ರಾಮ ವಾಸ್ತವ್ಯ ಮುಂದುವರಿಕೆ, 24 ತಾಸು ನಿರಂತರ 3ಫೇಸ್ ವಿದ್ಯುತ್ ಸೌಲಭ್ಯ, ಗರ್ಭಿಣಿ ಬಾಣಂತಿಯರಿಗೆ ಆರು ತಿಂಗಳ ಕಾಲ ಮಾಸಿಕ 6 ಸಾವಿರ ರೂ. ಆರೋಗ್ಯ ಭತ್ಯೆ, ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ , ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ , ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಿ ಡೊನೇಷನ್ ಹಾವಳಿಗೆ ಕಡಿವಾಣ, ಪ್ರತಿ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ರಾಂತಿ, ವಿದ್ಯುತ್ ಸ್ವಾವಲಂಬಿ ಕರ್ನಾಟಕ ಸೇರಿದಂತೆ ಹತ್ತು ಹಲವು ಮಹತ್ವದ ಭರವಸೆಗಳನ್ನು ಜೆಡಿಎಸ್ ಇಂದು ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ರಾಜ್ಯದ ಜನರಿಗೆ ನೀಡಿದೆ.

ಇನ್ನು ಸಾಕಷ್ಟು ವಿಶೇಷತೆಗಳಿಂದ ಕೂಡಿದ ಜೆಡಿಎಸ್ ಪ್ರಣಾಳಿಕೆ ರಾಜ್ಯದ ಜನತೆಯನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಾ ಎಂದು ಕಾದು ನೋಡಬೇಕು.