ಚುನಾವಣಾ ಅಕ್ರಮ

ಚುನಾವಣಾ ಅಕ್ರಮ

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದೂ, ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಚುನಾವಣಾ ಆಯೋಗ ಕಟ್ಟೆಚ್ಚರವಯಿಸಿದೆ. 

ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಣ ದುರ್ಬಳಕೆ ಮತ್ತು ಅಕ್ರಮ ಸಾಗಣೆಗಳ ಮೇಲೆ ಹದ್ದಿನ ಕಣ್ಣಿನ ನಿಗಾ ಇಟ್ಟಿರುವ ಚುನಾವಣಾ ಆಯೋಗ ಮತ್ತು ಆದಾಯ ತೆರಿಗೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈವರೆಗೆ 19.96 ಕೋಟಿ ನಗದು ಹಾಗೂ 4.81 ಕೋಟಿ ರೂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.  

ಇನ್ನು ಚುನಾವಣಾ ಎಷ್ಟೇ ಅಕ್ರಮದ ಬಗ್ಗೆ ನಿಗವಯಿಸಿದರು ಇನ್ನು ರಾಜ್ಯದಲ್ಲಿ ಆಯೋಗದ ಕಣ್ತಪ್ಪಿಸಿ  ಅಕ್ರಮ ನಡೆಯುತ್ತಿದೆ. ಏಪ್ರಿಲ್.30ರವರೆಗೆ ಬೆಂಗಳೂರು, ಮೈಸೂರು, ದಾವಣಗೆರೆ, ಖಾನಾಪುರ, ಹುಬ್ಬಳ್ಳಿ ಮೊದಲಾದ ಸ್ಥಳಗಳಲ್ಲಿ ಆಯೋಗ ಮತ್ತು ಐಟಿ ಅಧಿಕಾರಿಗಳು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 19.96 ಕೋಟಿ ನಗದು ಹಾಗೂ 4.81 ಕೋಟಿ ರೂ. ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪವನ್ ದಿವಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.