ಲಘುವಾಹನ ಚಾಲನಾ ತರಬೇತಿ

ಲಘುವಾಹನ ಚಾಲನಾ ತರಬೇತಿ

ಬಾಗಲಕೋಟೆ, ಸೆ. 11: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2016-17ನೇ ಸಾಲಿನಲಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ನಿಗದಿತಪಡಿಸಿದ ಅನುದಾನದಲ್ಲಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ದಿಗಾಗಿ ವಿಶೇಷ ಅಭಿವೃದ್ದಿ ಯೋಜನೆಯಡಿ ಲಘು ವಾಹನಾ ಚಾಲನೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ 28 ರೊಳಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ತರಬೇತಿ ಅರ್ಜಿಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.