ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮಂಜೂರಿ : ರಮೇಶ ಜಿಗಜಿಣಗಿ

ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮಂಜೂರಿ : ರಮೇಶ ಜಿಗಜಿಣಗಿ

ವಿಜಯಪುರ, ,ಜೂ,14: ರಾಷ್ಟೀಯ ಹೆದ್ದಾರಿ 218 ರ ಮೇಲ್ಸೇತುವೆಗಳನ್ನು ಮಂಜೂರಿ ಮಾಡಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದೆ. 58 ಕೋಟಿ ರೂ. ವೆಚ್ಚದ ಒಂದು ಸೇತುವೆ ನಿಗದಿತ ಅವಧಿಯಲ್ಲಿ ಪೂರ್ಣ ಗೊಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರಕಾರಕ್ಕೆ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ತಿಳಿಸಲಾಗಿದೆ ಎಂದು ಕೇಂದ್ರ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಸಚಿವ ರಮೇಶ ಜಿಗಜಿಣಗಿ ಇಂದು ತಿಳಿಸಿದ್ದಾರೆ.

ಆರ್.ಓ.ಬಿ ಮೇಲ್ಸೇತುವೆ ನಿರ್ಮಿಸುವ ಮೂಲಕ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ವಿಜಾಪುರ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆ ಸಲ್ಲಿಸುತ್ತಿದ್ದುದ್ದನ್ನು ಗಮನಿಸಿ ಕೇಂದ್ರ ಸರಕಾರ ಮೇಲೆ ಒತ್ತಡ ತರುವ ಮೂಲಕ ಸೇತುವೆ ನಿರ್ಮಾಣಕ್ಕೆ ಶೀಘ್ರ ಅನುಮತಿ ಪಡೆಯುಲಾಗಿದೆ ಎಂದು ಜಿಗಜಿಣಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.