ರಮ್ಯಾ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗುವುದು ಖಚಿತ

ರಮ್ಯಾ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗುವುದು ಖಚಿತ

ಬೆಂಗಳೂರು,ನ.29: ಮಾಜಿ ಸಂಸದೆ ರಮ್ಯಾ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗುವುದು ಖಚಿತ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಅಥವಾ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ಖಚಿತಪಡಿಸಿದ ಇಂಧನ ಸಚಿವ ಡಿ.ಕೆ. ಶಿವಕುಮಾರ್, ರಮ್ಯಾ ಅವರು ಎಐಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನು ಮುಂದೆ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಲಿದ್ದಾರೆ. ಪಕ್ಷದ ಉಪಾಧ್ಯಕ್ಷರಾಗಿರುವ ರಾಹುಲ್‌ಗಾಂಧಿ ಅವರ ತೀರ್ಮಾನಕ್ಕೆ ಬದ್ಧರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ರಮ್ಯಾ ಅವರು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿ. ಅಲ್ಲದೆ, ನನ್ನ ನೇತೃತ್ವದ ಕೆಪಿಸಿಸಿ ಪ್ರಚಾರ ಸಮಿತಿ ಯಲ್ಲೂ ರಮ್ಯಾ ಅವರು ಇದ್ದಾರೆ. ಅದರಲ್ಲಿಯೂ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದರು.