ಹೊಸವರ್ಷದಂದು ರಾತ್ರಿ 12 ಗಂಟೆಗೆ ಹುಟ್ಟಿದ ಹೆಣ್ಣು ಮಗುವಿಗೆ 5 ಲಕ್ಷ ರೂ

ಹೊಸವರ್ಷದಂದು ರಾತ್ರಿ 12 ಗಂಟೆಗೆ ಹುಟ್ಟಿದ ಹೆಣ್ಣು ಮಗುವಿಗೆ 5 ಲಕ್ಷ ರೂ

ಬೆಂಗಳೂರು,1: ಹೊಸವರ್ಷದಂದು ರಾತ್ರಿ 12 ಗಂಟೆಗೆ ಹುಟ್ಟಿದ ಹೆಣ್ಣು ಮಗುವಿಗೆ 5 ಲಕ್ಷ ರೂ. ನೀಡೋ ಮೂಲಕ ಬಿಬಿಎಂಪಿ ಭರ್ಜರಿ ಗಿಫ್ಟ್ ನೀಡಿದೆ.

ಹೊಸವರ್ಷದ ಮೊದಲ ದಿನವೇ ಗೋಪಿ-ಪುಷ್ಪಾ ದಂಪತಿಗೆ ಹುಟ್ಟಿದ ಹೆಣ್ಣು ಮಗುವಿಗೆ ಬಿಬಿಎಂಪಿ ಈ ಭರ್ಜರಿ ಗಿಫ್ಟ್ ಘೋಷಿಸಿದ್ದಾರೆ. ರಾಜಾಜಿನಗರದ ಡಾ.ನಾಗರಾಜ್ ಸ್ಮಾರಕ ಆಸ್ಪತ್ರೆಯಲ್ಲಿ 12.05 ಕ್ಕೆ ಹೆಣ್ಣು ಮಗು ಜನಿಸಿದೆ. ಕೂಡಲೇ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ತೆರಳಿ ಬಹುಮಾನ ಘೋಷಿಸಿದ್ದಾರೆ.

ತಮ್ಮ ಮಗುವಿಗೆ ಒಲಿದ ಈ ಅದೃಷ್ಟದಿಂದ ದಂಪತಿ ಖುಷಿಯಾಗಿದ್ದಾರೆ. ಮೇಯರ್ ಇದೇ ಮೊದಲ ಬಾರಿ ಈ ಬಗೆಯ ಬಹುಮಾನ ಘೋಷಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಹಾಗೂ ಮಗುವಿನ ಹೆಸರಿನಲ್ಲಿ ಐದು ಲಕ್ಷ ಹಣ ಠೇವಣಿ ಇಡಲು ನಿರ್ಧರಿಸಲಾಗಿದೆ. ಈ ಹಣವನ್ನು 18 ವರ್ಷದ ನಂತರ ಮಗುವಿನ ಉನ್ನತ ಶಿಕ್ಷಣಕ್ಕೆ ಬಳಕೆ ಮಾಡಬಹುದು. ಐದು ಲಕ್ಷದ ಠೇವಣಿಯ ಬಡ್ಡಿ ಹಣವನ್ನು ಪ್ರತಿ ವರ್ಷ ಶಿಕ್ಷಣಕ್ಕೆ ಉಪಯೋಗಿಸಬಹುದು.