ಕೊನೆಗೂ ಬಂದಿತವಾಯ್ತು ಶಿವನಗಿರಿ ಗ್ರಾಮದ ಜನರ ನಿದ್ದೆಗೆಡಿಸಿದ ಚಿರತೆ

 ಕೊನೆಗೂ ಬಂದಿತವಾಯ್ತು ಶಿವನಗಿರಿ ಗ್ರಾಮದ ಜನರ ನಿದ್ದೆಗೆಡಿಸಿದ ಚಿರತೆ

ಬಹಳ ದಿನಗಳಿಂದ ಶಿವನಗಿರಿ ತಪ್ಪಲಿನ ಸೋಮನಾಥಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹೊರ ವಲಯದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. 

ಇನ್ನು ಗ್ರಾಮಸ್ಥರಿಗೆ ಚಿರತೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಭಯಭೀತರಾಗಿದ್ದ ಜನತೆ ಚಿರತೆಯನ್ನು ಹಿಡಿದು ದೂರದ ಕಾಡಿಗೆ ಬಿಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ತಾನಾಗಿಯೆ ಗ್ರಾಮದೊಳಗೆ ಆಗಮಿಸಿದ ಚಿರತೆಯನ್ನು ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಅರಣ್ಯ ಇಲಾಖೆ ಸಿಬ್ಬಂದಿ, ಹಾಗೂ ವಲಯ ಅರಣ್ಯಾಧಿಕಾರಿ ಮೋಹನ್ ನಾಯ್ಕ ನೇತೃತ್ವದ ತಂಡದವರು ಕಾರ್ಯಾಚರಣೆ ನಡೆಸಿ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಬೋನಿನಲ್ಲಿ ಬಂಧಿಸಿ ತೆಗೆದುಕೊಂಡು ಹೋಗಿದ್ದಾರೆ. 

ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯಾಧಿಕಾರಿ ಮೋಹನ್‍ನಾಯ್ಕ ರವರು ಘಟನೆಯ ವಿವರಗಳನ್ನು ವಿವರಿಸಿ ಬಂಧಿತ ಚಿರತೆಯನ್ನು ಅರಣ್ಯದಲ್ಲಿ ಬಿಡಲಾಗುವುದು ಎಂದು ತಿಳಿಸಿದ್ದಾರೆ.