ಮಹಾದ ನೀರಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ಧನ್ಯವಾದಗಳು

ಮಹಾದ ನೀರಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ಧನ್ಯವಾದಗಳು

ವಿಜಯಪುರ,ಮೇ.23: ಕಳೆದ ಒಂದು ತಿಂಗಳಿನಿಂದ ವಿಜಯಪುರ ನಗರ ಸೇರಿದಂತೆ ವಿಜಯಪುರ ಜಿಲ್ಲೆಯು ನೀರಿನ ಕೊರತೆಯಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ 2.5 ಟಿ.ಎಮ್.ಸಿ. ನೀರು 
ಹರಿಸಿ ಜಿಲ್ಲೆಯ ಕಷ್ಟಗಳನ್ನು ಪರಿಹಾರ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ .
     ಮನವಿ ಮಾಡಿ ನೀರು ಬಿಡಿಸಲು ಕಾರಣಿಭೂತರಾದ ಕೇಂದ್ರ ಸಚಿವ ಅನಂತಕುಮಾರ ಅವರಿಗೆ ಜಿಲ್ಲೆಯ ಪರವಾಗಿ ಜಿಲ್ಲಾ ಅಧ್ಯಕ್ಷ ವಿಠ್ಠಲ ಕಟಕದೊಂಡ, ಸಾಂಸದ, ಕೇಂದ್ರ ಸಚಿವ ರಮೇಶ ಜಿಗಜಿಣಗಿ, 
ಶಾಸಕ ರಮೇಶ ಭೂಸನೂರ, ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ. ಬೆಳ್ಳುಬ್ಬಿ, ಜಿ.ಪ್ರ.ಕಾ. ವಿವೇಕಾನಂದ ಡಬ್ಬಿ, ಸಂಗರಾಜ ದೇಸಾಯಿ, ರವಿಕಾಂತ ಬಗಲಿ, 
ಆರ್.ಎಸ್. ಪಾಟೀಲ ಕೂಚಬಾಳ & ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಅನಂತ ಧನ್ಯವಾದಗಳನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷ ವಿಠ್ಠಲ ಕಟಕದೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.