ವಿಜಯಪುರ,ಜ.1: ಸಿಂದಗಿ ತಾಲೂಕಿನ ಕಲಕೇರಿಯಲ್ಲಿ ಜನೆವರಿ 5 ಮತ್ತು 6 ರಂದು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದ 16 ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅನಿವಾರ್ಯ ಕಾರಣಗಳಿಂದ ಮೂಂದುಡಲಾಗಿದೆ. ಸಮ್ಮೇಳನವನ್ನು ಜನೆವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.