ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಿಂದ ಸಂಸದರ ಹೆಸರು ಮಾಯ

ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಿಂದ ಸಂಸದರ ಹೆಸರು ಮಾಯ

ಬೆಳಗಾವಿ: ರಾಜ್ಯಾದ್ಯಂತ ಇದೇ 10ರಂದು ನಡೆಯಲಿರುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಪ್ರಕಟಿಸಿದ್ದ ಸಂಸದ ಸುರೇಶ್‌‌ ಅಂಗಡಿ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೆಸರನ್ನು ಜಿಲ್ಲಾಡಳಿತ ಕೈಬಿಟ್ಟಿದೆ.

ಈಗಾಗಲೇ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಡುವಂತೆ ಸಂಸದರು ಮನವಿ ಮಾಡಿದ್ದರು. ಇಬ್ಬರ ಮನವಿಯನ್ನು ಪರಿಗಣಿಸಿದ ಬೆಳಗಾವಿ ಜಿಲ್ಲಾಡಳಿತ ವಿಶೇಷ ಆಮಂತ್ರಿತರ ಪಟ್ಟಿಯಿಂದ ಹೆಸರನ್ನು ಕೈಬಿಟ್ಟಿದೆ. ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರಲ್ಲಿ ನಾಳೆ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ನಡೆಯಲಿದೆ.