ವಿವಿಧ ಸಂಘ-ಸಂಸ್ಥೆಗಳೊಂದಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ಸಭೆ

ವಿವಿಧ ಸಂಘ-ಸಂಸ್ಥೆಗಳೊಂದಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ಸಭೆ

ವಿಜಯಪುರ, ಜೂ.10:  ನಗರದಲ್ಲಿ ಇದೇ ಜೂನ್. 11 ರಂದು ನಡೆಯಲಿರುವ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ನಾಮಕರಣ ಕಾರ್ಯಕ್ರಮದ ಅಂಗವಾಗಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

ಎಂ.ಬಿ.ಪಾಟೀಲ ಅವರು ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮಹಿಳಾ ಮಂಡಳಗಳ, ಅಕ್ಕನ ಬಳಗ, ವಿವಿಧ ಧಾರ್ಮಿಕ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಗರದ ಸಿದ್ದೇಶ್ವರ ಕಲಾ ಭವನದಲ್ಲಿ ಸಭೆ ನಡೆಸಲಿದ್ದಾರೆ. ಸಂಬಂಧಪಟ್ಟ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.