ವಿಜಯಪುರ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ವಿಜಯಪುರ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ವಿಜಯಪುರ,ಡಿ.31: ವಿಜಯಪುರ ನಗರದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ನಗರದ ವಾರ್ಡ-ಗ್ರಾಮಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 11 ಅಂಗನವಾಡಿ ಸಹಾಯಕಿ ಹುದ್ದೆಗಳ ಅಂತಿಮ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿತ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಾರ್ವಜನಿಕರಲ್ಲಿ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : 04-01-2018ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ವಿಜಯಪುರ ನಗರ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.