ವಿದ್ಯಾಸಿರಿ : ಅವಧಿ ವಿಸ್ತರಣೆ

ವಿದ್ಯಾಸಿರಿ : ಅವಧಿ ವಿಸ್ತರಣೆ

ಬಾಗಲಕೋಟೆ,s ಸೆ. 11: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಶುಲ್ಕ ವಿನಾಯಿತಿ, ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ 20 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.