ಷರತ್ತಿಲ್ಲದೆ ಶೀಘ್ರ ಕಾಂಗ್ರೆಸ್ ಸೇರ್ಪಡೆ : ಅಮರಿಂದರ್ ಸಿಂಗ್

ಷರತ್ತಿಲ್ಲದೆ ಶೀಘ್ರ ಕಾಂಗ್ರೆಸ್ ಸೇರ್ಪಡೆ : ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನವಜೋತ್ ಸಿಂಗ್ ಸಿಧು ಅವರಿಗೆ ಉಪ ಮುಖ್ಯಮಂತ್ರಿಯ ಸ್ಥಾನದ ಆಫರ್ ನೀಡಲಾಗಿದೆ ಎಂಬ ಸುದ್ದಿಗಳಿಗೆ ತೆರೆ ಎಳೆದಿರುವ ಪಂಜಾಬ್ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ಅವರು, ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಸಿಧು ಅವರು ಯಾವುದೇ ಷರತ್ತಿಲ್ಲದೆ ಶೀಘ್ರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.  ಸೂಕ್ತ ಸಮದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯ ಯಾವುದೇ ಷರತ್ತು ವಿಧಿಸದೆ ಕಾಂಗ್ರೆಸ್ ಸೇರಲು ಸಿಧು ನಿರ್ಧರಿಸಿದ್ದಾರೆ ಎಂದು ಅಮರಿಂದರ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸಿಧು ಅವರು ಅಮೃತಸರ ಪೂರ್ವ ವಿಧಾಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಅವರ ವೃತ್ತಿಪರ ಬದ್ಧತೆಗಳಿಂದಾಗಿ ಪಕ್ಷ ಸೇರ್ಪಡೆ ತಡವಾಗುತ್ತಿದೆ ಎಂದು ಹೇಳಿದ್ದಾರೆ.