ಖೋಖೋ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ

ಖೋಖೋ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ


ವಿಜಯಪುರ,ಸೆ.1: ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ  ಜರುಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಕೆ.ಸಿ.ನಗರದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಬಾಲಕ-ಬಾಲಕಿಯರು ಖೋಖೋ ಆಟದಲ್ಲಿ  ಹಾಗೂ ಬಾಲಕರು ರಿಲೇ ಓಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಗುರುಗುಳು ತಿಳಿಸಿದ್ದಾರೆ.