ಅ.12ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ನಿವಾರಣೆ ಸಭೆ

ಅ.12ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ನಿವಾರಣೆ ಸಭೆ

ವಿಜಯಪುರ, ಅ.10: ಜಿಲ್ಲೆಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆಯನ್ನು ಹೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ  ಇದೇ ಅಕ್ಟೋಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದ್ದು, ಜಿಲ್ಲೆಯ ವಿದ್ಯುತ್ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳನ್ನು ನಿವಾರಿಸಿಕೊಳ್ಳಲು ಹೆಸ್ಕಾಂ ಅಧಿಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.